ಸಿದ್ದರಾಮಯ್ಯ ರಾಜಿನಾಮೆ ಕೊಡಲಿ

ಹುಬ್ಬಳ್ಳಿ: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅನುಮತಿ ಕೊಟ್ಟಿರುವುದರಿಂದ ಬಹಳಷ್ಟು ಜನ ಕಾಂಗ್ರೆಸ್ ನಾಯಕರು ಒಳಗೊಳಗೇ ಖುಷಿ ಪಡುತ್ತಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.


ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಸಿದ್ದರಾಮಯ್ಯ ಪಾರಾಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೊಡಲೇ ಬೇಕು ಎಂದರು. ರಾಜ್ಯಪಾಲರು ಪ್ರಾಸಿಕ್ಯೂಷನ್ ಕೊಡ್ತಾರೋ ಇಲ್ವೋ ಅಂತಾ ಚರ್ಚೆ ನಡೀತಾ ಇತ್ತು. ಮುಡಾ ಮತ್ತು ವಾಲ್ಮೀಕಿ ಹಗರಣಕ್ಕೆ ನಾವು ಹೋರಾಟ ಮಾಡುತ್ತಾ ಬಂದಿದ್ದೇವೆ. ಸಿಎಂ ರಾಜೀನಾಮೆ ಕೊಡಬೇಕು. ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂದು ಒತ್ತಾಯಿಸಿದರು.