ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ

0
8

ಬೆಳಗಾವಿ: ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಅಂದರೆ ಏನೂ ಮಾಡಲು ಆಗುವುದಿಲ್ಲ ಎಂದು ಮಾಜಿ ಸಚಿವ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಆರೋಪಗಳು ಕೇಳಿ ಬಂದಾಗ, ಸಣ್ಣ ರೈಲ್ವೆ ಅಪಘಾತ ಆದಾಗ ರಾಜೀನಾಮೆ ನೀಡಿದ ಉದಾಹರಣೆಗಳಿವೆ. ನೈತಿಕ ಹೊಣೆ ಹೊತ್ತು ಈ ಮೊದಲು ರಾಜೀನಾಮೆ ನೀಡುತ್ತಿದ್ದರು. ಆದರೆ, ಈಗ ಇಂತಹ ದೊಡ್ಡ ಆರೋಪ ಕೇಳಿ ಬಂದರೂ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆದಿದ್ದಾರೆ ಎಂದು ಟೀಕಿಸಿದರು.
ರಾಜೀನಾಮೆ ಕೊಡಬೇಕೋ, ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ. ಆದರೆ, ತಮ್ಮ ಕೈಕೆಳಗೆ ಲೋಕಾಯುಕ್ತ ತನಿಖೆ ನಡೆಯಬೇಕಾಗುತ್ತದೆ. ಹೀಗಿದ್ದರೂ ಸಿಎಂ ರಾಜೀನಾಮೆ ಕೊಡುವುದಿಲ್ಲ. ಮೊದಲು ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ ಎಂದರು.

Previous articleಶಿರೂರು ಭೂ ಕುಸಿತ ದುರಂತ: ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ
Next articleಪದಕ ಗೆಲ್ಲಲು ಪರಿಶ್ರಮ, ತರಬೇತಿ ಅತ್ಯಗತ್ಯ