ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಹೈಕೋರ್ಟ್ ತೀರ್ಪು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದ್ದು, ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದೇ ಹಗರಣದಲ್ಲಿಯೂ ಭಾಗಿಯಾಗಿಲ್ಲ. ಬಿಜೆಪಿಯವರು ತೊಂದರೆ ಸೃಷ್ಟಿಸುತ್ತಿದ್ದಾರೆ ಎಂದರು.