ಸಿದ್ದರಾಮಯ್ಯ ವಿರುದ್ಧ ಹರಿಯಾಣದಲ್ಲೂ ಹರಿಹಾಯ್ದ ಮೋದಿ

0
6

ಹರಿಯಾಣ : ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಇದೆ. ಆಡಳಿತಕ್ಕೆ ಬಂದ ಎರಡೇ ವರ್ಷದೊಳಗೆ ಕರ್ನಾಟಕ ರಾಜ್ಯವನ್ನು ಕುಲಗೆಡಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಮಾತನಾಡಿ ಕರ್ನಾಟಕ ಮುಖ್ಯಮಂತ್ರಿಯ ವಿರುದ್ಧ ಭೂ ಹಗರಣದ ಆರೋಪವಿದೆ. ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್‌ ಸಿಎಂ ವಿರುದ್ಧ ತನಿಖೆ ನಡೆಸಲು ಆದೇಶ ನೀಡಿದೆ. ದಲಿತರಿಗೆ ಮೀಸಲಾಗಿದ್ದ ಅನುದಾನವನ್ನೂ ಕಾಂಗ್ರೆಸ್‌ನವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷದಷ್ಟು ನಂಬಿಕೆದ್ರೋಹದ ಪಕ್ಷ ಇನ್ನೊಂದಿಲ್ಲ, ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ, ಇಂತಹ ಪಕ್ಷಕ್ಕೆ ಹರಿಯಾಣದಲ್ಲಿ ಅವಕಾಶ ಕೊಡುತ್ತಿರಾ? ಎಂದು ಮೋದಿ ಪ್ರಶ್ನಿಸಿದ್ದಾರೆ.

Previous articleಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ನಡೆದು ಕೊಳ್ಳುತ್ತಿದ್ದೀರಿ
Next articleಸಿದ್ದರಾಮಯ್ಯ ರಾಜೀನಾಮೆ ನೀಡುವುದು ಒಳಿತು