Home ತಾಜಾ ಸುದ್ದಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ತೊಂದರೆಯಾಗಲ್ಲ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ತೊಂದರೆಯಾಗಲ್ಲ

0

ಬೆಳಗಾವಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದೇ ಅಷ್ಟೇ, ಆದರೆ ಹೈಕೋರ್ಟ್ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದೇ ಅಷ್ಟೇ, ಆದರೆ ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.
ಎಲ್ಲಾ ಶಾಸಕರು, ಸಚಿವರು, ಹೈಕಮಾಂಡ್ ಕೂಡ ಸಿಎಂ ಸಿದ್ದರಾಮಯ್ಯ ಅವರ ಪರ ಇದ್ದು, ಸಿಎಂ ಆಗಿ ಸ್ಥಾನದಲ್ಲಿ ಅವರೇ ಮುಂದುವರೆಯುತ್ತಾರೆ. ರಾಜೀನಾಮೆ ನೀಡುವ ಪ್ರಶ್ನೆ ಬರಲ್ಲ. ಹೈಕೋರ್ಟ್ ತನಿಖೆ ಮುಂದುವರೆಸಬೇಕೆಂದು ಆದೇಶಿಸಿದೆ. ತನಿಖೆಯಾಗಲಿ, ತನಿಖೆಗೆ ಯಾರದು ಅಡ್ಡಿ ಇಲ್ಲಾ. ಯಾವ ರೀತಿಯ ಹೋರಾಟ ಮಾಡಬೇಕೆಂದು ಸಿಎಂ ಸಿದ್ದರಾಮ್ಯನವರೇ ನಿರ್ಧರಿಸುತ್ತಾರೆ ಎಂದು ಹೇಳಿದರು.

Exit mobile version