ಬೆಳಗಾವಿ: ಬಸವನಗಲ್ಲಿಯ ಮನೆಯೊಂದರಲ್ಲಿ ಸಿಲೆಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಮನೆಗೆ ಬೆಂಕಿ ತಗಲಿದ ಪರಿಣಾಮ ನಾಲ್ವರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಸಂಜೆ ನಡೆದಿದೆ.
ಬೆಳಗಾವಿ ನಗರದ ಬಸವನಗಲ್ಲಿಯ ಮೋಹನ್ ಗೋಪಾಲಕೃಷ್ಣ ಭಟ್ ಎಂಬುವರ ಮನೆಯಲ್ಲಿ ಇಂದು ಸಂಜೆ ಸಿಲೆಂಡರ್ ಗ್ಯಾಸ್ ಸೋರಿಕೆಯಾಗಿ ಗ್ಯಾಸ್ ಮನೆಯ ತುಂಬೆಲ್ಲಾ ಹರಡಿ ಈ ಘಟನೆ ನಡೆದಿದೆ. ಈ ವೇಳೆ ಮನೆಯಲ್ಲಿದ್ದ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದು ಓರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಗೊತ್ತಾಗಿದೆ.
ಘಟನಾ ಸ್ಥಳಕ್ಕೆ ಖಡೇಬಝಾರ್ ಠಾಣೆಯ ಪೋಲೀಸರು ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಗ್ಯಾಸ್ ಲಿಕೇಜ್‌ನಿಂದಾಗಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ತಕ್ಷಣ ಧಾವಿಸಿ ನೆರವು ನೀಡಿದ ಸ್ಥಳೀಯರ ಸಮಯಪ್ರಜ್ಣೆಯಿಂದಾಗಿ ಗ್ಯಾಸ್ ಸ್ಪೋಟ ಆಗಿಲ್ಲ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.