Home ತಾಜಾ ಸುದ್ದಿ ಸಿಲಿಂಡರ್ ಸೋರಿಕೆ ಪ್ರಕರಣ: ಇಬ್ಬರು ಗಾಯಾಳು ಸಾವು

ಸಿಲಿಂಡರ್ ಸೋರಿಕೆ ಪ್ರಕರಣ: ಇಬ್ಬರು ಗಾಯಾಳು ಸಾವು

0

ಬೆಳಗಾವಿ: ಬೆಳಗಾವಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಬಂದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಬೆಳಗಾವಿಯ ಬಸವನಗಲ್ಲಿ ಮನೆಯಲ್ಲಿ ಭಾನುವಾರ ಮಧ್ಯಾಹ್ನ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಭಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗಾಯಾಳುಗಳಲ್ಲಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಡುಪಿ ಮೂಲದ ಕಾಮಾಕ್ಷಿ ಭಟ್ ಹಾಗೂ ಹೇಮಂತ್ ಭಟ್ ಮೃತರು ಎಂದು ತಿಳಿದುಬಂದಿದೆ. ಇನ್ನು ಗಾಯಾಳುಗಳಲ್ಲಿ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

Exit mobile version