ಸಿಲಿಂಡರ್ ಸ್ಪೋಟ ಪ್ರಕರಣ: ಮಾಲಾಧಾರಿ ಸಾವಿನ ಸಂಖ್ಯೆ ನಾಲ್ಕಕ್ಕೇ

0
29

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿದ್ದ ಘಟನೆಯಲ್ಲಿ ಚಿಕಿತ್ಸೆ ಫಲಿಸದೆ ಮತ್ತೊಬ್ಬ ಮಾಲಾಧಾರಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ನಾಲ್ಕಕ್ಕೇರಿದಂತಾಗಿದೆ.
ಉಣಕಲ್ ಹತ್ತಿರದ ಸಾಯಿ ನಗರದಲ್ಲಿ ಸೋಮವಾರ ಬೆಳಗಿನ ಜಾವ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿದ್ದರು. ಎಲ್ಲರಿಗೂ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇದೀಗ ಒಟ್ಟು ನಾಲ್ವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ ರಾಜು ಮೂಗೇರಿ(21) ಹಾಗೂ ಇದೀಗ ಲಿಂಗರಾಜ ಬೀರನೂರ(19) ಎನ್ನುವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಕಳೆದ ದಿನ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು.ಇನ್ನುಳಿದ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ.

Previous articleವಿಶ್ವವಿದ್ಯಾಲಯದಲ್ಲಿ ಆರ್ಥಿಕ ಸಂಶೋಧನಾ ಅಧ್ಯಯನಕ್ಕೆ ಚಿಂತನೆ
Next articleನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನ: ಓರ್ವನ ಬಂಧನ