ಸಿಲಿಂಡರ್ ಸ್ಪೋಟ: 7 ಜನರಿಗೆ ಗಂಭೀರ ಗಾಯ

0
7

ಬೆಳಗಾವಿ: ಸಿಲಿಂಡರ್‌ ಸ್ಫೋಟಕ್ಕೆ ಮಗು ಸೇರಿ 7 ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಬೆಳಗಾವಿಯ ಗೋಕಾಕ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಸಿಲಿಂಡರ್ ಸ್ಫೋಟದ ಭೀಕರತೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಸಿಲಿಂಡರ್‌ ಸ್ಫೋಟಕ್ಕೆ ಮಗು ಸೇರಿ 7 ಮಂದಿ ಗಂಭೀರ ಗಾಯಗೊಂಡಿದ್ದಾರೆ. ರಾತ್ರಿ ಮಲಗಿರುವಾಗ ಸಿಲಿಂಡರ್‌ನಲ್ಲಿ ಅನಿಲ ಸೋರಿಕೆ ಆಗಿತ್ತು. ಮೊಬೈಲ್‌ ಟಾರ್ಚ್‌ ಆನ್‌ ಮಾಡಿದಾಗ ಒಮ್ಮೆಲೆ ಸಿಡಿದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ‌ದಾಖಲು ಮಾಡಲಾಗಿದೆ. ಅಂಕಲಗಿ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous articleಭಯಾನಕ ಸ್ಫೋಟ : 9 ಮಂದಿ ಸಾವು
Next articlevisibility ಸಮಸ್ಯೆಗೊಂದು ಪರ್ಮನೆಂಟ್ ಪರಿಹಾರ