ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಕಿಮ್ಸ್‌ನಲ್ಲಿ ದಾಖಲಾಗಿರುವ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಚಿಕಿತ್ಸೆಗೆ ಬೆಂಗಳೂರಿನ ತಜ್ಞ ವೈದ್ಯರ ತಂಡ ಇಂದು ಆಗಮಿಸಲಿದೆ.
ಗಾಯಗೊಂಡ ಅಯ್ಯಪ್ಪ ಮಾಲಾಧಾರಿಗಳಿಗೆ ಉತ್ತಮ ಚಿಕಿತ್ಸೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮುತುವರ್ಜಿ ವಹಿಸಿದ್ದರು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ. ಕೆ ಟಿ ರಮೇಶ್ ಹಾಗೂ ಬಿಎಂಸಿಆರ್‌ಐನ ಪ್ಲಾಸ್ಟಿಕ್ ಸರ್ಜನ್ ಡಾ. ಎಂ ಶಂಕ್ರಪ್ಪ ಅವರು ಇಂದು (ಬುಧವಾರ) ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಕಿಮ್ಸ್‌ಗೆ ಭೇಟಿ ನೀಡಿ ಗಾಯಗೊಂಡ ಅಯ್ಯಪ್ಪ ಮಾಲಾಧಾರಿಗಳ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ.