Home ಸುದ್ದಿ ದೇಶ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ

ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ

0

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮಾರ್ಚ್ 20ರವರೆಗೆ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗುತ್ತದೆ. ಕಳೆದ ಒಂದು ವಾರದಿಂದ ಎಎಪಿ ನಾಯಕ ಸಿಬಿಐ ಕಸ್ಟಡಿಯಲ್ಲಿದ್ದರು.
ದೆಹಲಿಯಲ್ಲಿ ಈಗ ರದ್ದಾಗಿರುವ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು.

Exit mobile version