ಚಿಕ್ಕಮಗಳೂರು: ಬೆಳಗಾವಿ ಅಧಿವೇಶನದ ವೇಳೆ ವಿಧಾನ ಪರಿಷತ್‌ನಲ್ಲಿ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಸಿ.ಟಿ. ರವಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಗುರುವಾರ ಸಂಜೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಕೆಲಕಾಲದ ಬಳಿಕ ಬಿಡುಗಡೆ ಮಾಡಿದರು.
ಮಹಿಳಾ ಸಚಿವರ ವಿರುದ್ಧ ಅವಾಚ್ಯ ಶಬ್ಧ ಬಳಕೆ ಮಾಡಿರುವ ಸಿ.ಟಿ. ರವಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವುದು ಮಾತ್ರವಲ್ಲದೆ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಮುತ್ತಿಗೆ ವೇಳೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಸಿಡಿಎ ಅಧ್ಯಕ್ಷ ಮಹಮದ್ ನಯಾಜ್, ಪ್ರಮುಖರಾದ ಮಧು, ಅಕ್ಮಲ್ ಮತ್ತಿತರರಿದ್ದರು.