ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನು ವಿಧಾನ ಪರಿಷತ್‌ನಲ್ಲಿ ಅಶ್ಲೀಲ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ಸಿ ಟಿ ರವಿ ಅವರನ್ನು ಬೆಳಗಾವಿ ಹಿರೇಬಾಗೆವಾಡಿ ಠಾಣಾ ಪೊಲೀಸರು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿ ತಕ್ಷಣವೇ ಬಿಡುಗಡೆಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದ್ದಾರೆ.