ಸುಮಲತಾ ಮನೆಗೆ ತೆರಳಿ ಮೈತ್ರಿ ಬೆಂಬಲಿಸಲು ಎಚ್‌ಡಿಕೆ ಮನವಿ

0
19

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಕೊನೆಗೂ ಮುನಿಸು ಮರೆತು ಸಂಸದೆ ಸುಮಲತಾ ಅವರನ್ನ ಭೇಟಿಯಾಗಿದ್ದು, ಊಹಾ-ಪೋಹಗಳಿಗೆ ತೆರೆ ಎಳೆದಿದ್ದಾರೆ.
ಬೆಂಗಳೂರಿನಲ್ಲಿರುವ ಸುಮಲತಾ ಅವರ ನಿವಾಸದಲ್ಲಿ ತೆರಳಿದ ಕುಮಾರಸ್ವಾಮಿ ಅವರು ಸುಮಲತಾರನ್ನು ಭೇಟಿಯಾಗಿ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಕುಮಾರಸ್ವಾಮಿಯವರು ನಾನು ಮತ್ತು ಅಂಬರೀಶ್‌ ಹಲವು ವರ್ಷಗಳ ಸ್ನೇಹಿತರು. ಸಂಸದೆ ಸುಮಲತಾ ಅವರು ಕೂಡ ನನಗೆ ಊಟ ಬಡಿಸಿದ್ದಾರೆ. ನಾವು ಶಾಶ್ವತ ಶತ್ರುಗಳಲ್ಲ. ಅವರು ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ ಎಂದಿದ್ದಾರೆ.

Previous articleಎಲ್‌.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ
Next articleಕೊಟ್ಟ ಮಾತಂತೆ ನಡೆದುಕೊಂಡ ನಾಯಕ ಕುಮಾರಸ್ವಾಮಿ