Home ನಮ್ಮ ಜಿಲ್ಲೆ ಉತ್ತರ ಕನ್ನಡ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿತ: ಕಾರವಾರ ಟನೆಲ್ ಬಂದ್

ಸುರಂಗ ಮಾರ್ಗದಲ್ಲಿ ಕಲ್ಲು ಕುಸಿತ: ಕಾರವಾರ ಟನೆಲ್ ಬಂದ್

0

ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಕಲ್ಲು, ಮಣ್ಣು ಜಾರಿ ಬಿದ್ದಿರುವದರಿಂದ ಸ್ಥಳಕ್ಕೆ ಕಾರವಾರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿದ್ದಾರೆ. ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Exit mobile version