Home ತಾಜಾ ಸುದ್ದಿ ಸುಳ್ಳು-ಅಪಪ್ರಚಾರ ಕಾಂಗ್ರೆಸ್‌ನ ಒಂದೇ ನಾಣ್ಯದ ಎರಡು ಮುಖ

ಸುಳ್ಳು-ಅಪಪ್ರಚಾರ ಕಾಂಗ್ರೆಸ್‌ನ ಒಂದೇ ನಾಣ್ಯದ ಎರಡು ಮುಖ

0

ಬೆಳಗಾವಿ: ಕಾಂಗ್ರೆಸ್‌ನವರಿಗೆ ಜಾಣ ಕುರುಡು, ಜಾಣ ಕಿವುಡು ಇದೆ. ಒಳ್ಳೆಯ ಸಂಗತಿ ಯಾವುದೂ ಕಾಂಗ್ರೆಸ್ ಕಣ್ಣಿಗೆ ಬೀಳಲ್ಲ. ಸುಳ್ಳು ಮತ್ತು ಅಪಪ್ರಚಾರ ಕಾಂಗ್ರೆಸ್‌ನ ಒಂದೇ ನಾಣ್ಯದ ಎರಡು ಮುಖಗಳು. ಸುಳ್ಳಿನಿಂದಲೇ ಕಾಂಗ್ರೆಸ್ ಬದುಕಿದೆ. ಕಾಂಗ್ರೆಸ್ ಸುಳ್ಳೇ ಆಕ್ಸಿಜನ್ ಇದ್ದಂಗೆ. ಸುಳ್ಳು ಇಲ್ಲದಿದ್ದರೆ ಕಾಂಗ್ರೆಸ್ ಸತ್ತು ಹೋಗುತ್ತದೆ. ಸುಳ್ಳನ್ನೇ ಉಸಿರಾಗಿಸಿಕೊಂಡು ಅವರು ಬದುಕಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಬೆಳಗಾವಿ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಗೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ. ಆದರೆ ಕಾಂಗ್ರೆಸ್ ಇದನ್ನು ಇಡಿ ಎನ್‌ಡಿಎ ಅಪರಾಧ ಎಂಬ ಥರ ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಅವರು, ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್‌ಐಟಿ ರಚನೆ ಮಾಡಿದೆ. ತನಿಖೆಯಾಗಲಿ. ಮಹಿಳಾ ನ್ಯಾಯಾಧೀಶ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಹೆಚ್‌ಡಿಕೆ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಒಬ್ಬರಿಗೊಂದು ಇನ್ನೊಬ್ಬರಿಗೊಂದು ಇಲ್ಲ. ಎಲ್ಲರಿಗೂ ಒಂದೇ ಕಾನೂನು ಇದ್ದು, ತನಿಖೆಗೂ ಮುಂಚೆ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಅನ್ನೋದು ಹೊರಬರುತ್ತೆ. ದೂರುದಾರರ ದೂರಿನಲ್ಲಿನ ಹೇಳಿಕೆ ಪ್ರಕಾರ, ಇದು ನಾಲ್ಕೈದು ವರ್ಷದ ಹಿಂದಿನ ಘಟನೆ. ನಾಲ್ಕೈದು ವರ್ಷದ ಹಿಂದೆ ಜನತಾದಳ ಕಾಂಗ್ರೆಸ್ ಜೊತೆ ಇತ್ತು ಅನ್ನೋದು ಇವರು ಮರೆತಿದ್ದಾರೆ. ತನಿಖೆ ಆಗಲಿ, ಸತ್ಯ ಏನೆಂಬುದು ಹೊರಬರಲಿ ಎಂದು ಹೇಳಿದರು.

Exit mobile version