ನವದೆಹಲಿ: ಸುಳ್ಳು ಸುದ್ದಿ ಹರಡುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ತಿಳಿಸಿದರು.
ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿಸಿದರೆ ಐಟಿ ಕಾಯ್ದೆಯಡಿ ಸುಳ್ಳು ಸುದ್ದಿಕೋರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಟೀಕಿಸುವ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡಿಸಿದರೆ ಸಹಿಸುವುದಿಲ್ಲ ಎಂದರು.