ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳೋದು ಹೊಸ ವಿಷಯ ಏನಲ್ಲ. ಆದರೆ ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ದೊಡ್ಡ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯವರ ಹೊಸ ಹೊಸ ಸುಳ್ಳುಗಳಿಗೆ ತಿರುಗೇಟು ನೀಡಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದರು. ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ ಹಣ ತಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಪ್ರಧಾನಿಯವರ ಸುಳ್ಳಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಮೇಲಿನಂತೆ ಪ್ರತಿಕ್ರಿಯಿಸಿದರು.
ಅಬಕಾರಿ ಇಲಾಖೆಯಲ್ಲಿ 700 ಕೋಟಿ ಎಲ್ಲಿರತ್ತೆ. ಯಾರು ಕೊಡ್ತಾರೆ? ಪ್ರಧಾನಿ ಆದವರಿಗೆ ಈ ಮಟ್ಟದ ತಿಳಿವಳಿಕೆ ಕೊರತೆ ಇರಬಾರದು ಎಂದರು.