ಬೆಳಗಾವಿ: ಸುವರ್ಣ ವಿಧಾನಸೌಧದ ಅಂಗಳದಲ್ಲಿ ಪ್ರತಿಷ್ಠಾಪಿಸಿದ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣಗೊಂಡಿತು.
1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಸುವರ್ಣ ವಿಧಾನಸೌಧದಲ್ಲಿ ಪ್ರತಿಷ್ಠಾಪಿಸಿದ ಮಹಾತ್ಮಗಾಂಧೀಜಿ ಪ್ರತಿಮೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚರಕ ತಿರುಗಿಸುವ ಮೂಲಕ ಅನಾವರಣಗೊಳಿಸಿದರು. ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅಧಿವೇಶನದ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ,
ಸಚಿವರಾದ ಸತೀಶ ಜಾರಕಿಹೊಳಿ, ಜಿ.ಪರಮೇಶ್ವರ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇತರರಿದ್ದರು.
ಲಾಂಛನ ಬಿಡುಗಡೆ: ಗದುಗಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಲಾಂಛನ ಬಿಡುಗಡೆಗೊಳಿಸಲಾಯಿತು.