Home ತಾಜಾ ಸುದ್ದಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಸೆರೆ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಸೆರೆ

0


ಸಂ.ಕ. ಸಮಾಚಾರ, ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯಯರನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಇಂದು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಬಜಪೆಯ ಶಾಂತಿಗುಡ್ಡದ ಬದ್ರಿಯಾ ಜುಮ್ಮಾ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (೫೯) ಎಂಬಾತನನ್ನು ಬಂಧಿಸಿದ್ದಾರೆ.
ಮೇ ೧ ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಂಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು ಯಾನೆ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆ ಮರೆಸಿಕೊಳ್ಳಲು ಸಹಕರಿಸಿದ್ದಾನೆ.
ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

Exit mobile version