Home ತಾಜಾ ಸುದ್ದಿ ಸುಹಾಸ್ ಶೆಟ್ಟಿ ಕೊಲೆ ಹಿನ್ನಲೆ: ಸುಳ್ಯದಲ್ಲಿ ಸಂಪೂರ್ಣ ಬಂದ್

ಸುಹಾಸ್ ಶೆಟ್ಟಿ ಕೊಲೆ ಹಿನ್ನಲೆ: ಸುಳ್ಯದಲ್ಲಿ ಸಂಪೂರ್ಣ ಬಂದ್

0

ಸುಳ್ಯ:ಮಂಗಳೂರಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ಶುಕ್ರವಾರ ಕರೆ ನೀಡಿದ ಬಂದ್ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿಯೂ ಬಂದ್ ನಡೆಸಲಾಗಿದೆ. ಅಂಗಡಿ ಮುಂಗಟ್ಟುಗಳು, ವಾಣೀಜ್ಯ ಕೇಂದ್ರಗಳು ಮುಚ್ಚಿವೆ. ಬೆಳಿಗ್ಗೆ ಕೆಲವು ಅಂಗಡಿ ಮುಂಗಟ್ಟುಗಳು ತೆರೆದಿದ್ದರೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಂದ್ ಮಾಡುವಂತೆ ಕರೆ ನೀಡಿದ ಹಿನ್ನಲೆಯಲ್ಲಿ ಅವುಗಳು ಮುಚ್ಚಿದವು. ಮೆಡಿಕಲ್, ಹಾಲು ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದೆ.
ವಾಹನ ಸಂಚಾರ ಇದ್ದರೂ ಜನ ಸಂಚಾರ ಮತ್ತು ವಾಹನಗಳ ಸಂಖ್ಯೆ ವಿರಳವಾಗಿದೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ವಿಎಚ್‌ಪಿ ಕರೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ದ.ಕ.ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Exit mobile version