ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಬಂದ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದ್ದು. ಜಿಲ್ಲಾಡಳಿತದ ವಿರೋಧದ ನಡುವೆಯೂ ಈ ಬಂದ್‌ಗೆ ಕಾಫಿನಾಡಿನ ಗ್ರಾಮೀಣ ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ (ವಿ.ಎಚ್.ಪಿ.) ಹಾಗೂ ಬಜರಂಗದಳ ನೇತೃತ್ವದಲ್ಲಿ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿದಂತೆ ಮಂಗಳೂರು-ಚಿಕ್ಕಮಗಳೂರು ಗಡಿ ಗ್ರಾಮಗಳು ಸಂಪೂರ್ಣ ಸ್ಥಬ್ಧವಾಗಿವೆ. ಬೆಳಿಗ್ಗೆ 9 ಗಂಟೆಯಾದರೂ ಅಂಗಡಿ-ಮುಂಗಟ್ಟುಗಳು ತೆರೆಯದೇ ಇದ್ದು, ಜನಜೀವನ ಸಂಪೂರ್ಣ ಸ್ತಬ್ಧವಾಗಿದೆ. ಕೊಟ್ಟಿಗೆಹಾರದಲ್ಲಿ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿವೆ, ಮತ್ತು ಸ್ಥಳೀಯರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.
ಚಿಕ್ಕಮಗಳೂರು ಬಂದ್​ಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು, ಸುಹಾಸ್ ಹತ್ಯೆ ಖಂಡಿಸಿ ಇಂದು ಘೋಷಿಸಿರುವ ವಿಹೆಚ್​ಪಿ, ಬಜರಂಗದಳ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದ್ದಾರೆ.