ಬೆಂಗಳೂರು: ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ- NIA ಮೂಲಕ ತನಿಖೆ ನಡೆಸಬೇಕು ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ.
ಪ್ರಕರಣ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ NIA ಯಿಂದ ತನಿಖೆ ನಡೆಸಿದರೆ, ಅಪರಾಧಿಗಳನ್ನು ಕಾನೂನಿನ ಚೌಕಟ್ಟಿಗೆ ತರಲು ಸಾಧ್ಯ, ಈ ಘಟನೆಯ ನಂತರ ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಜನಪ್ರತಿನಿಧಿಗಳ ಸಭೆ ಕರೆದು ಚರ್ಚೆ ನಡೆಸಬೇಕಾಗಿತ್ತು. ಆದರೆ ಆ ಕಾರ್ಯ ಮಾಡಿಲ್ಲ. ಬದಲಾಗಿ ಅಪರಾಧಿಗಳ ಸಹಾನೂಭೂತಿ ಇರುವವರ ಪರವಾಗಿ ಇರುವುದು ಅತ್ಯಂತ ಖಂಡನಾರ್ಹ. ಹತ್ಯೆ ಪ್ರಕರಣದ ಸೂಕ್ಷ್ಮತೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ