ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಪ್ರತೀಕಾರದ ಪೋಸ್ಟ್‌: ಪ್ರಕರಣ ದಾಖಲು

0
34

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಪ್ರತೀಕಾರದ ಪೋಸ್ಟ್‌ ಹಾಕಿದ್ದವರ ವಿರುದ್ಧ ಮಂಗಳೂರು ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ, ಫೇಸ್ಬುಕ್, ವಾಟ್ಸಪ್‌ಗಳಲ್ಲಿ ʻಶತ್ರು ಸಂಹಾರ ಶರುವಾಗಿದೆ, ಪ್ರತಿರೋಧ ಅಪರಾಧವಲ್ಲʼ. ಸುಹಾಸ್ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ಬಲವನ್ನು ಈಗ ತೋರಿಸದೇ ಇದ್ದಲ್ಲಿ ಮುಂದೊಂದು ದಿನ ನಾವೇ ಇರುವುದಿಲ್ಲ. ʻನಮಗೆ ಯಾವುದೇ ಉತ್ತರಗಳು ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು. ಜೀವಕ್ಕೆ, ಜೀವನೇ ಬೇಕುʼ ಎಂಬ ಸಂದೇಶ ಹಾಕಿಕೊಂಡಿದ್ದ 12 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತಂತೆ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮುಲ್ಕಿ, ಉರ್ವಾ, ಬರ್ಕೆ, ಮೂಡಬಿದ್ರೆ, ಕಾವೂರು ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿವೆ.

Previous articleಹುಬ್ಬಳ್ಳಿ: ಎನ್‌ಕೌಂಟರ್‌ಗೆ ಬಲಿಯಾದ ರಿತೇಶ ಶವ ಕೊನೆಗೂ ಅಂತ್ಯಕ್ರಿಯೆ
Next articleದೇಶದ ಐಕ್ಯತೆಗೆ ಮೋದಿ ನಿರ್ಧಾರಕ್ಕೆ ಬೆಂಬಲ