ಬೆಂಗಳೂರು: ಆನೇಕಲ್ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆಯಾಗಿದ್ದ ಘಟನೆಗೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.
ಮೇ 21 ರಂದು ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಹತ್ಯೆಯಾದ ಬಾಲಕಿಯನ್ನು ರೀಮಾ (17) ಎಂದು ಗುರುತಿಸಲಾಗಿತ್ತು. ಬಂಧಿತ ಎಲ್ಲಾ ಆರೋಪಿಗಳು ಬಿಹಾರದ ನವಾಡ ಜಿಲ್ಲೆಯವರಾಗಿದ್ದಾರೆ. ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ವಿಭಾಗದ ಸೂರ್ಯನಗರ ಪೊಲೀಸರು ಬಿಹಾರದಿಂದ ಕರ್ನಾಟಕಕ್ಕೆ ಕರೆತರುತ್ತಿದ್ದಾರೆ.