ಸೃಜನಶೀಲ ಅಭಿವ್ಯಕ್ತಿಗಳಿಗೆ ನಮ್ಮ ಬೆಂಬಲವಿರಲಿದೆ

0
19

ಬೆಂಗಳೂರು: ಸೃಜನಶೀಲ ಅಭಿವ್ಯಕ್ತಿಗಳಿಗೆ ನಮ್ಮ ಬೆಂಬಲವಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಂಗಶಂಕರದಲ್ಲಿ ಆಯೋಜನೆಯಾಗಿದ್ದ ಪ್ಯಾಲೆಸ್ತೀನ್‌ ಪರವಾದ ಕಿರು ನಾಟಕ, ಕವನ ವಾಚನ ಕಾರ್ಯಕ್ರಮಕ್ಕೆ ಪೊಲೀಸರು ನಿರಾಕರಣೆ ಮಾಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸಾಮಾಜಿಕ ಜಾಲತಾಣದಲ್ಲಿ ಪತ್ರಿಕಾ ಪ್ರಕಟಣೆ ಸಹಿತ ಪೋಸ್ಟ್‌ ಮಾಡಿದ್ದಾರೆ. ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸ ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಗಳಿಗೆ ನಮ್ಮ ಬೆಂಬಲವಿರಲಿದೆ. ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳುವಳಿಕೆಯ ಕಾರಣಕ್ಕಾಗಿ ಅನಾವಶ್ಯಕ ಗೊಂದಲ ನಿರ್ಮಾಣವಾಗಿರುವ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಮುಂದೆ ಇಂತಹ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸಗಳ ಜೊತೆ ನಮ್ಮ ಸರ್ಕಾರ ನಿಲ್ಲಲಿದೆ ಎಂದು ಬರೆದುಕೊಂಡಿದ್ದಾರೆ.

Previous articleಶ್ರೀರಂಗಪಟ್ಟಣದಲ್ಲಿ ವಿಶ್ವ ಏಡ್ಸ್ ದಿನಾಚರಣೆ
Next articleಆಲದಹಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ