ಬಿಹಾರ : ಟಿ20ಯಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಹೆಗ್ಗಳಿಕೆಯ ವೈಭವ್ ಸೂರ್ಯವಂಶಿಗೆ ಬಿಹಾರ ರಾಜ್ಯ ಸರ್ಕಾರ ಬಂಪರ್ ಬಹುಮಾನ ನೀಡಿ ಘೋಷಿಸಿದೆ.
ಜೈಪುರದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಅಮೋಘ ಶತಕ ಗಳಿಸಿದ ವೈಭವ್ ಸೂರ್ಯವಂಶಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 10 ಲಕ್ಷ ರೂ. ಬಹುಮಾನ ಘೋಷಿಸಿದರು ಹಾಗೂ 2024 ರಲ್ಲಿ ಅವರ ಭೇಟಿಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ಪೋಸ್ಟ್ ಮಾಡಿದ್ದಾರೆ ವೈಭವ್ ಸೂರ್ಯವಂಶಿಗೆ ಅಭಿನಂದನೆ ತಿಳಿಸಿರುವ ಅವರು. ಕಿರಿಯ ವಯಸ್ಸಿನಲ್ಲೇ ಅವರ ಪ್ರತಿಭೆ ಮುಂದೆ ಭಾರತೀಯ ಕ್ರಿಕೆಟ್‌ಗೆ ಹೊಸ ಭರವಸೆಯಾಗಿದೆ. ಇಂದು ಇಡೀ ದೇಶವೇ ಅವನ ಬಗ್ಗೆ ಹೆಮ್ಮೆ ಪಡುತ್ತಿದೆ. 2024ರಲ್ಲಿ ನಾನು ವೈಭವ್ ಮತ್ತು ಅವರ ತಂದೆಯನ್ನ ಭೇಟಿಯಾಗಿದ್ದೆ, ಆಗಲೇ ನಾನು ಅವರ ಭವಿಷ್ಯ ಉಜ್ವಲವಾಗಿರಲಿದೆ ಎಂದು ಹಾರೈಸಿದ್ದೆ. ಹಾಗೆಯೇ ಇಂದು ಯಶಸ್ಸು ಕಾಣುತ್ತಿದ್ದಾರೆ. ಐಪಿಎಲ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನದ ಬಳಿಕ ನಾನು ಅವರಿಗೆ ಫೋನ್ ಮಾಡಿ ಮಾತನಾಡಿದ್ದೆ. ವೈಭವ್ ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಇನ್ನಷ್ಟು ದಾಖಲೆಗಳನ್ನು ಸೃಷ್ಟಿಸಿ ದೇಶಕ್ಕೆ ಕೀರ್ತಿ ತರಲೆಂದು ಹಾರೈಸುತ್ತೇನೆ ಎಂದು ಶುಭಕೋರಿದ್ದಾರೆ.