ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್: ವಿದ್ಯಾರ್ಥಿ ಆತ್ಮಹತ್ಯೆ

ಹಾವೇರಿ: 3ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೇವಗಿರಿಯಲ್ಲಿ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಉಲ್ಲಾಸ ವೀರಪ್ಪ ಹುದಲಿ(21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಈತ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜ್‌ನಲ್ಲಿ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದನು. ನಾಲ್ಕನೇ ಸೆಮಿಸ್ಟರ್‌ನಲ್ಲಿ ಅಧ್ಯಯನ ಮಾಡುತ್ತಿದ್ದ ಉಲ್ಲಾಸ ಇತ್ತೀಚೆಗೆ ಪ್ರಕಟಗೊಂಡಿದ್ದ 3ನೇ ಸೆಮಿಸ್ಟರ್‌ನ ಒಂದು ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು, ಬೇಸರದಲ್ಲಿದ್ದನು. ಎರಡು ದಿನದಿಂದ ಕಾಲೇಜ್‌ಗೂ ಹೋಗಿರಲಿಲ್ಲ, ಇದರಿಂದ ಸಹಪಾಠಿಗಳು ಗಾಬರಿಗೊಂಡು ಹುಡುಕಾಟ ನಡೆಸಿದ್ದರು. ದೇವಗಿರಿ ಗ್ರಾಮದಲ್ಲಿರುವ ಕೆರೆಯ ದಡದಲ್ಲಿ ಆತನ ಮೊಬೈಲ್ ಹಾಗೂ ಕೈಗಡುಗ ಸೋಮವಾರ ಪತ್ತೆಯಾಗಿತ್ತು. ಇದನ್ನು ಆಧರಿಸಿ ಪೊಲೀಸರು ಹುಡುಕಾಟ ನಡೆಸಿದ್ದರು. ಮಂಗಳವಾರ ಬೆಳಗ್ಗೆ ಉಲ್ಲಾಸ ಮೃತ ದೇಹ ಪತ್ತೆಯಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.