ಸೋಲು ನಮಗೆ ಹೊಸದೇನಲ್ಲ

0
18

ಬೆಂಗಳೂರು: ಸೋಮಶೇಖರ್ ನಡೆ ನಿರೀಕ್ಷಿತ. ಹಿಂದೆ ತುಂಬ ಜನ ಸೋತಿಲ್ವಾ? ಇದು ಮೈತ್ರಿ ಮೇಲೂ, ಲೋಕಸಭೆ ಮೇಲೂ ಪರಿಣಾಮ ಬೀರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಎಸ್‌.ಟಿ. ಸೋಮಶೇಖರ್ ಅಡ್ಡ ಮತದಾನ ಕುರಿತು ಮಾತನಾಡಿರುವ ಅವರು, ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ನಿನ್ನೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕರೆದುಕೊಂಡು ಹೋದವರು ಯಾರು ಎಂದು ನಮಗೂ ಗೊತ್ತಿದೆ ಎಂದರು.
ನಮಗೆ, ನಮ್ಮ ಕುಟುಂಬಕ್ಕೆ ಸೋಲು ಹೊಸದಲ್ಲ. ಹಿಂದೆ ತುಂಬ ಜನ ಸೋತಿದ್ದಾರೆ. ದೇವೇಗೌಡ್ರು, ವಾಜಪೇಯಿ ಕೂಡ ಸೋತಿದ್ದಾರೆ. ಇದೇ ಸಿದ್ದರಾಮಯ್ಯ ಸೋತಿಲ್ವಾ? ನನ್ನ ಮಗನೂ ಎರಡು ಸಲ ಸೋತಿದ್ದಾನೆ. ರಾಜಕೀಯದಲ್ಲಿ ಗೆಲ್ಲುವುದು-ಸೋಲುವುದು ಸಹಜ ಎಂದರು.

Previous articleಸೋಮಶೇಖರನ್ನು ಸಹಿಸಿಕೊಳ್ಳುವ ಅವಶ್ಯಕತೆ ಇಲ್ಲ
Next articleಜೆಡಿಎಸ್‌ಗೆ ಆತ್ಮಸಾಕ್ಷಿ ಇದೆಯೇ