ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿನ ವಿದ್ಯುತ್ ಸಮಸ್ಯೆಗಳ ಕುರಿತು ಚರ್ಚೆ ಹಾಗೂ ಸಲಹಾ ಸಭೆ ನಡೆಯಿತು. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಚರ್ಚೆ ಹಾಗೂ ಸಲಹಾ ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಚಿವ ಮಂಕಾಳ್ ವೈದ್ಯ ಹಾಗೂ ಶಾಸಕರು, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.