ಸ್ನೇಹಮಯಿ ಕೃಷ್ಣ, ಗೋವಿಂದರಾಜು ಮೇಲೆ ವಾಮಾಚಾರ: ಇಬ್ಬರ ವಶ

0
44

ಮಂಗಳೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಿಸಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳು ವಶಕ್ಕೆ ಪಡೆದಿದ್ದಾರೆ.
ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಈ ಇಬ್ಬರು ಆರೋಪಿಗಳು ಕುರಿಗಳನ್ನು ಬಲಿ ನೀಡಿ, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತನಿಖೆಯಲ್ಲಿ ಬಯಲಾಗಿದೆ.
ಸ್ನೇಹಮಯಿ ಕೃಷ್ಣ, ಗಂಗರಾಜು, ಪ್ರಸಾದ್ ಅತ್ತಾವರ, ಶ್ರೀನಿಧಿ ಮತ್ತು ಸುಮಾ ಆಚಾರ್ಯ ಹೆಸರಿನ ಚೀಟಿ ಕಾಳಿಕಾಂಬ ದೇವಿ ಕೊರಳಿಗೆ ಹಾಕಲಾಗಿತ್ತು. ಬಲಿ ನೀಡಿದ್ದ ಕುರಿಗಳ ರಕ್ತವನ್ನ ಸ್ನೇಹಮಯಿ, ಗಂಗರಾಜು ಫೋಟೋಗೆ ಅರ್ಪಣೆ ಮಾಡಲಾಗಿತ್ತು. ವಾಮಾಚಾರದ ದೃಶ್ಯ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ್ ಮೊಬೈಲ್‌ನಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಮಸಾಜ್ ಪರ್ಲಾರ್ ಗಲಾಟೆಯಲ್ಲಿ ಬಂಧನವಾಗಿರುವ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಮೊಬೈಲ್ ಪರಿಶೀಲಿಸಿದಾಗ ಸ್ಫೋಟಕ ಅಂಶ ಪೊಲೀಸರಿಗೆ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್‌ಟಿಐ ಕಾರ್ಯಕರ್ತ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ಪೊಲೀಸರಿಗೆ ಲಭ್ಯವಾಗಿತ್ತು. ಸರಣಿ ಪ್ರಾಣಿ ಬಲಿ ಮಾಡಿರುವ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆ ಪೊಲೀಸರಿಗೆ ಆರೋಪಿಗಳು ವಾಮಾಚಾರ ಮಾಡಿಸಿರುವುದು ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯಲ್ಲಿ ಎಂದು ತಿಳಿದುಬಂದಿದೆ.

Previous articleಕಾಸರಗೋಡಿನ ರಸ್ತೆಗೆ ಗಾವಸ್ಕರ್ ಹೆಸರು
Next articleಸತೀಶ್‌ರನ್ನ ಹೇಗೆ ಗಡಿಪಾರು ಮಾಡುತ್ತೀರಿ?