Home ಸುದ್ದಿ ದೇಶ ಸ್ವಚ್ಛತಾ ಅಭಿಯಾನದಲ್ಲಿ ಮೋದಿ

ಸ್ವಚ್ಛತಾ ಅಭಿಯಾನದಲ್ಲಿ ಮೋದಿ

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿಯ ಪೂರ್ವ ದಿನವಾದ ಇಂದು ಕಸ ಗುಡಿಸಿ ಸ್ವಚ್ಛಗೊಳಿಸಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಗಾಂಧಿಜಿಯವರಿಗೆ ಸ್ವಚ್ಛಾಂಜಲಿ ಅರ್ಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಹಂಚಿಕೊಂಡಿರುವ ಅವರು ಅಭಿಯಾನಕ್ಕೆ ಅಂಕಿತ್‌ರೊಂದಿಗೆ ಇಬ್ಬರು ಕಸ ಗುಡಿಸುವ ಮೂಲಕ ವಿಶೇಷವಾಗಿ ಚಾಲನೆ ನೀಡಿದ್ದಾರೆ.
ಬಳಿಕ ಮೋದಿಯವರು ಫಿಟ್‍ನೆಸ್ ಮತ್ತು ಆರೋಗ್ಯದ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಈ ವೀಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರು ಹಂಚಿಕೊಂಡಿದ್ದಾರೆ. ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯವು “ಏಕ್‌ ತಾರೀಖ್‌, ಏಕ್‌ ಘಂಟಾ, ಏಕ್‌ ಸಾಥ್” ಎಂಬ ಅಭಿಯಾನವು ಭಾನುವಾರ ಬೆಳಗ್ಗೆ 10 ಗಂಟೆಯಿಂದ 11 ಗಂಟೆವರೆಗೆ ನಡೆಯಿತು. ದೇಶಾದ್ಯಂತ ಬಿಜೆಪಿ ನಾಯಕರು, ಸಾರ್ವಜನಿಕರು ಸೇರಿ ಹಲವರು ಅಭಯಾನದಲ್ಲ ಪಾಲ್ಗೊಂಡು, ಸ್ವಚ್ಛತೆ ಮೂಲಕ ಜನರಿಗೆ ಅರಿವು ಮೂಡಿಸಿದರು. ಇದರೊಂದಿಗೆ ಮಹಾತ್ಮ ಗಾಂಧೀಜಿ ಅವರಿಗೂ ಸಾರ್ಥಕ ರೀತಿಯಲ್ಲಿ ಗೌರವ ಸಲ್ಲಿಸಿದರು.

https://samyuktakarnataka.in/%e0%b2%95%e0%b2%b8-%e0%b2%ae%e0%b3%81%e0%b2%95%e0%b3%8d%e0%b2%a4%e0%b2%95%e0%b3%8d%e0%b2%95%e0%b3%86-%e0%b2%ad%e0%b2%be%e0%b2%b0%e0%b2%a4%e0%b2%95%e0%b3%8d%e0%b2%95%e0%b3%86-%e0%b2%b8%e0%b3%8d/

Exit mobile version