Home ತಾಜಾ ಸುದ್ದಿ ಹಣದ ಹೊಳೆ ಹರಿಸಿ ಸಾಧಿಸಿದ ಗೆಲುವು

ಹಣದ ಹೊಳೆ ಹರಿಸಿ ಸಾಧಿಸಿದ ಗೆಲುವು

0

ಹುಬ್ಬಳ್ಳಿ: ಶಿಗ್ಗಾವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ತೇನೆ, ಸ್ವೀಕಾರ ಮಾಡ್ತೇನೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್‌ಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲಿನ ಜನರ ಸ್ಪಂದನೆ ನೋಡಿದ್ರೆ ನಮ್ಮ ಪರ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಗೆಲುವು ಸಾಧಿಸಿದ್ದಾರೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ ಶಾಸಕರು ಜನ ಆಯ್ಕೆ ಮಾಡಿದ್ದಾರೆ.
ನಾವು ಶಿಗ್ಗಾವಿ, ಸವಣೂರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ಅಭಿವೃದ್ಧಿ ಪರ್ವ ಹಾಗೆ ಮುಂದುವರೆಯಲಿ ಅಂತ ಆಶೀಸುತ್ತೇನೆ. ಕ್ಷೇತ್ರದ ಜನರಿಗೆ ಒಳ್ಳೆಯದಾಗಲಿ ಅಂತ ಬಯಸುತ್ತೇನೆ ಎಂದರು. 10 ಜನ ಸಚಿವರು, 40ಕ್ಕಿಂತ ಹೆಚ್ಚು ಶಾಸಕರು ಬಂದಿದ್ದರು ಸರ್ಕಾರದ ಯಂತ್ರ, ಹಣದಿಂದ ಅವರು ಗೆದ್ದಿದ್ದಾರೆ ಎಂದರು.

Exit mobile version