ಹತ್ರಾಸ್ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 121 ಜನರು ಮೃತಪಟ್ಟ ದುರಂತದ ಬಳಿಕ ಸಂತ್ರಸ್ತರನ್ನು ರಾಹುಲ್ ಗಾಂಧಿ ಭೇಟಿಯಾಗಿ ಸಾಂತ್ವನ ಹೇಳುತ್ತಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಅಲಿಗಢದಲ್ಲಿ ಸಂತ್ರಸ್ತ ಕುಟುಂಬಗಳನ್ನು ರಾಹುಲ್ ಗಾಂಧಿ ಭೇಟಿ ಮಾಡಿರುವ ವಿಡಿಯೋ ವೈರಲ್ ಆಗಿದೆ.
