ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ರಾಜಣ್ಣ ಇಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ನೀಡಿದ್ದಾರೆ.
ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ರಾಜಣ್ಣ ಇಂದು ಬೆಂಗಳೂರಿನಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ರಾಜಣ್ಣ ಮನವಿ ಸಲ್ಲಿಸಿದರು. ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದರು, ಮನವಿ ಸ್ವೀಕರಿಸಿದ ಬಳಿಕ ಪರಮೇಶ್ವರ್ ಮಾತನಾಡಿ, ರಾಜಣ್ಣ ಇಂದು ಮನವಿ ನೀಡಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಯಾವ ರೀತಿ ತನಿಖೆ ನಡೆಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ದೂರನ್ನು ಸ್ವೀಕರಿಸಲು ನನಗೆ ಸಾಧ್ಯವಿಲ್ಲ. ಪೊಲೀಸ್ ಠಾಣೆಯಲ್ಲೇ ದೂರು ನೀಡಬೇಕಾಗುತ್ತದೆ. ಈ ಮನವಿಯ ಆಧಾರದ ಮೇಲೆ ಕಾನೂನು ತಜ್ಞರ ಜೊತೆ ಚರ್ಚಿಸಿ, ಅವರ ಸಲಹೆ ಆಧರಿಸಿ ತೀರ್ಮಾನ ಮಾಡುತ್ತೇವೆ ಎಂದರು.
ಅವರು ಮನವಿ ಕೊಟ್ಟಿದ್ದಾರೆ. ಮನವಿಯನ್ನ ನಾನು ಸ್ವೀಕಾರ ಮಾಡಿದ್ದೇನೆ. ಮನವಿ ಆಧಾರದ ಮೇಲೆ ಏನ್ ಮಾಡಬೇಕು, ಯಾರಿಗೆ ಅದನ್ನು ಕಳುಹಿಸಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದರು.