Home ತಾಜಾ ಸುದ್ದಿ ಹನಿಟ್ರ್ಯಾಪ್: ಪ್ರಚೋದನೆಗೆ ಯಾರೂ ಒಳಗಾಗಬಾರದು…

ಹನಿಟ್ರ್ಯಾಪ್: ಪ್ರಚೋದನೆಗೆ ಯಾರೂ ಒಳಗಾಗಬಾರದು…

0

ಪವರ್ ಶೇರಿಂಗ್ ವಿಚಾರ ಚರ್ಚೆ ಆಗಬಾರದು

ಹುಬ್ಬಳ್ಳಿ: ಹನಿಟ್ರ್ಯಾಪ್ ಬಗೆಗಿನ ಚರ್ಚೆ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನೇ ಹುಡುಕುತ್ತಿರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳೀದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ವಿರೋಧ ಪಕ್ಷದವರ ವರ್ತನೆ ಸರಿಯಲ್ಲ. ಇದು ಅಸಭ್ಯತೆಯ ಲಕ್ಷಣ. ಹೀಗಾಗಿಯೇ ವಿಪಕ್ಷ ನಾಯಕರನ್ನು ಅಮಾನತ್ತು ಮಾಡಲಾಗಿದೆ ಎಂದರು.
ಸದನದಲ್ಲಿ ಹನಿಟ್ರ್ಯಾಪ್ ಬಗೆಗಿನ ಚರ್ಚೆಯನ್ನ ಹುಟ್ಟು ಹಾಕಿದ್ದೇ ನಮ್ಮವರು. ನಮ್ಮ ಪಕ್ಷದ ಮಂತ್ರಿಗಳು ಈ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕಿತ್ತು. ಬಹಿರಂಗವಾಗಿ ಸದನದಲ್ಲಿ ಚರ್ಚೆ ಮಾಡಬಾರದಿತ್ತು. ಇದರಿಂದ ಪಕ್ಷಕ್ಕೆ ಮುಜುಗರ, ಅಭದ್ರತೆ ಹೆಚ್ಚಾಗುತ್ತೆ ಎಂದರು.
ಅಧಿಕಾರ ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷದಲ್ಲಿ ಪವರ್ ಶೇರಿಂಗ್ ವಿಚಾರ ಚರ್ಚೆ ಆಗಬಾರದು. ಇಂತಹ ಚರ್ಚೆಗಳಿಂದ ಸರ್ಕಾರಕ್ಕೆ ಅಭದ್ರತೆ ಕಾಡುವುದು ನಿಶ್ಚಿತ. ವಿರೋಧ ಪಕ್ಷದವರು ಅದನ್ನೇ ಅಸ್ತ್ರವನ್ನಾಗಿ ಬಳಕೆ ಮಾಡುತ್ತಾರೆ. ಪವರ್ ಶೇರಿಂಗ್ ವಿಚಾರ ಈ ಮೊದಲೇ ನಿರ್ಣಯವಾಗಿದೆಯೋ, ಇಲ್ಲವೋ ಗೊತ್ತಿಲ್ಲ. ಆ ಬಗ್ಗೆ ಪಕ್ಷದ ವರಿಷ್ಠರು ತಿರ್ಮಾನ ಮಾಡುತ್ತಾರೆ. ಎನ್ನುವ ಮೂಲಕ ಸ್ವ ಪಕ್ಷೀಯರ ವಿರುದ್ಧವೇ ಮೊಯ್ಲಿ ಬೇಸರ ವ್ಯಕ್ತಪಡಿಸಿದರು.

Exit mobile version