ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು

0
15

ಗದಗ : ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಆರೋಪಿ ಬಗರ್ ಅಲಿ ಇರಾನಿ ಮೇಲೆ ಫೈರಿಂಗ್ ಮಾಡಲಾಗಿದೆ. ಗಂಗಾವತಿ ಪೊಲೀಸರ ಮೇಲೆ ಹಲ್ಲೆ ಕೇಸ್​ನಲ್ಲಿ ಬೆಟಗೇರಿ ಬಡಾವಣೆ ಪೊಲೀಸರಿಂದ ಬಂಧಿಸಲಾಗಿತ್ತು. ಹೊಳೆಆಲೂರಗೆ ಪಂಚನಾಮೆ ಹೋಗಿ ವಾಪಸ ಬರುವಾಗ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆರೋಪಿ ಬಗರ್ ಅಲಿ ಇರಾನಿ (27) ಅನ್ನುವಾತನ ಮೇಲೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರ ಮೇಲೆ ಹಲ್ಲೆ ‌ಮಾಡಿ ಎಸ್ಕೇಪ್ ಆಗಲು ಯತ್ನಿಸಿದಾಗ ಗುಂಡಿನ ದಾಳಿ ನಡೆದಿದೆ. ಆರೋಪಿ ಬಗರ್ ಅಲಿ ಇರಾನಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಆಗಲು ಯತ್ನಿಸಿದ್ದ. ಬಡಾವಣೆ ಠಾಣೆ ಸಿಬ್ಬಂದಿ ಹನುಮಂತ ಓಲೇಕಾರ, ಅಶೋಕ್ ಗಡದ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಗರ್ ಅಲಿ ಮೊಣಕಾಲಿಗೆ ಸಿಪಿಐ ಧೀರಜ್​ ಶಿಂಧೆ ಗುಂಡು ಹಾರಿಸಿದ್ದಾರೆ. ಸದ್ಯ ರೋಣ ಆಸ್ಪತ್ರೆಯಲ್ಲಿ ಪೊಲೀಸ್​ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗಿದೆ.

Previous articleಭ್ರಷ್ಟಾಚಾರದ ಹಣ ಚೆಲ್ಲಿ ಕಾಂಗ್ರೆಸ್ ಗೆದ್ದಿದೆ
Next articleಆರಾಮಾಗಿರೋದೇ ಜೀವ್ನ ಅಲ್ಲ..!