ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ಬಳಿ ಸಿಕಂದರಾಬಾದ್-ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿ ತಪ್ಪಿದ ಘಟನೆ ನಡೆದಿದೆ.
ಇಂದು ಮುಂಜಾನೆ 5:31 ಕ್ಕೆ ಖರಗ್‌ಪುರ ವಿಭಾಗದ ನಲ್ಪುರ್ ನಿಲ್ದಾಣದ ಮೂಲಕ ಹಾದು ಹೋಗುತ್ತಿದ್ದಾಗ 22850 ಸಿಕಂದರಾಬಾದ್-ಶಾಲಿಮಾರ್ ವೀಕ್ಲಿ ಎಕ್ಸ್‌ಪ್ರೆಸ್‌ನ ಪಾರ್ಸೆಲ್ ವ್ಯಾನ್ ಮತ್ತು ಎರಡು ಕೋಚ್‌ಗಳು ಹಳಿತಪ್ಪಿವೆ.

ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಆಗ್ನೇಯ ರೈಲ್ವೆ ತಿಳಿಸಿದೆ. ಕೋಲ್ಕತ್ತಾದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ನಲ್ಪುರದಲ್ಲಿ ಸಾಪ್ತಾಹಿಕ ವಿಶೇಷ ರೈಲು ಹಳಿತಪ್ಪಿದೆ. ರೈಲು ಹಳಿ ತಪ್ಪಿದ ಸ್ಥಳಕ್ಕೆ ಸಂತ್ರಗಚ್ಚಿ ಮತ್ತು ಖರಗ್‌ಪುರದಿಂದ ವೈದ್ಯಕೀಯ ನೆರವು ಒದಗಿಸಲಾಗಿದೆ. ಅವಘಡದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.