Home News ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ತಕ್ಕ ಶಾಸ್ತಿ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ತಕ್ಕ ಶಾಸ್ತಿ

ನ್ಯಾಯಕ್ಕೆ ಸಿಕ್ಕ ಜಯ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯೆ

ನವದೆಹಲಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪು ರಾಜ್ಯ ಕಾಂಗ್ರೆಸ್‌ ಸರ್ಕಾರದ ಅಧಿಕಾರ ದುರುಪಯೋಗಕ್ಕೆ ತಕ್ಕ ಶಾಸ್ತಿ ಮಾಡಿದಂತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.

ನ್ಯಾಯಾಧೀಕರಣದ ಈ ನಿರ್ಧಾರ ಕಾನೂನು ಸುವ್ಯವಸ್ಥೆಯ ಮಹತ್ವವನ್ನು ಎತ್ತಿ ಹಿಡಿದಿದೆ. ಕಾನೂನಿನ ಮೇಲಿನ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ. ಇದಕ್ಕಾಗಿ ನ್ಯಾಯಾಲಯಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಾನೂನು ಇಲಾಖೆ ಮತ್ತು ಪೊಲೀಸರು ವಿರೋಧ ವ್ಯಕ್ತಪಡಿಸಿದರೂ ರಾಜ್ಯ ಸರ್ಕಾರ ಪ್ರಕರಣ ಹಿಂಪಡೆಯುವ ತೀರ್ಮಾನ ತೆಗೆದುಕೊಂಡಿತ್ತು. ಆದರೆ, ರಾಜ್ಯ ಹೈಕೋರ್ಟ್‌ ಈಗ ಸರ್ಕಾರಕ್ಕೆ ತಕ್ಕ ಉತ್ತರ ನೀಡಿದೆ ಎಂದು ಜೋಶಿ ಹೇಳಿದರು.

ಹಳೇ ಹುಬ್ಬಳ್ಳಿ ಗಲಭೆ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಹಾಗಿದ್ದರೂ ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಯಾವುದೇ ಸಮರ್ಪಕ ಕಾರಣಗಳನ್ನು ನೀಡದೆ ಪ್ರಕರಣ ಹಿಂತೆಗೆದುಕೊಳ್ಳಲು ನಿರ್ಧರಿಸಿತ್ತು. ಹೈಕೋರ್ಟ್‌ ತೀರ್ಪು ಇದಕ್ಕೆಲ್ಲ ಬ್ರೇಕ್‌ ಹಾಕಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

Exit mobile version