Home ತಾಜಾ ಸುದ್ದಿ ಹಸೆಮಣೆ ಏರಬೇಕಿದ್ದ ಯುವತಿ ಆತ್ಮಹತ್ಯೆ

ಹಸೆಮಣೆ ಏರಬೇಕಿದ್ದ ಯುವತಿ ಆತ್ಮಹತ್ಯೆ

0

ಶಿವಮೊಗ್ಗ: ಒಂದೆರೆಡು ವಾರಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕಟ್ಲೆಹಕ್ಲು ಗ್ರಾಮದಲ್ಲಿ ನಡೆದಿದೆ.
ಚೈತ್ರಾ (೨೬) ಆತ್ಮಹತ್ಯೆಗೆ ಶರಣಾದ ಯುವತಿ. ಎಂಕಾಂ ಪದವೀಧರೆಯಾಗಿದ್ದ ಚೈತ್ರಾಳಿಗೆ ಮದುವೆ ನಿಶ್ಚಯವಾಗಿತ್ತು. ಫೆ. ೪ರಂದು ಚೈತ್ರಳಾ ಮದುವೆಗೆ ಸಿದ್ಧತೆ ನಡೆಸಲಾಗಿತ್ತು. ಈ ಮಧ್ಯೆ ಚೈತ್ರಾ ಕೆಲ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ನೇಣಿಗೆ ಶರಣಾಗಿದ್ದಾಳೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version