ಬಾಗಲಕೋಟೆ: ಹಾಜರಾತಿ ಕೊರತೆ ಕಾರಣಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಾಲ್ ಟಿಕೆಟ್ ಸಿಗದ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ವಿದ್ಯಾಗಿರಿಯ ಬಿಟಿಡಿಎ ಆವರಣದ ಆರ್‌ಎಂಎಸ್‌ಎ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಪಾಲಕರು, ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ವಾಗ್ವಾದವೂ ನಡೆಯಿತು. ನಿಯಮದ ಪ್ರಕಾರ ಶೇ. ೭೫ರಷ್ಟು ಹಾಜರಾತಿಯಿರದ ಕಾರಣ ಹಾಲ್ ಟಿಕೆಟ್ ಬಂದಿಲ್ಲ ಎಂದು ಮುಖ್ಯ ಶಿಕ್ಷಕಿ ಜಿ.ಎಸ್. ಖೋತ ಹಾಗೂ ಶಿಕ್ಷಕರು ಸ್ಪಷ್ಟಪಡಿಸಿದರು.
ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಕಾರಿ ಎಂ.ಎಸ್. ಬಡದಾನಿ, ವಿದ್ಯಾರ್ಥಿಗಳು, ಪಾಲಕರೊಂದಿಗೆ ಚರ್ಚಿಸಿದರು. ನಂತರ ಶಿಕ್ಷಕರಿಂದ ಮಾಹಿತಿ ಪಡೆದು ಮೇಲಾಧಿಕಾರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು. ನಂತರ ವಿದ್ಯಾರ್ಥಿಗಳು, ಪಾಲಕರು ಪ್ರತಿಭಟನೆ ವಾಪಸ್ ಪಡೆದರು.