ಹಾಡು ಹಗಲೆ ಗುಂಡಿನ ದಾಳಿ: ಓರ್ವ ಯುವಕ ಸಾವು

0
12

ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಇಂದು ಹಾಡಹಗಲೇ ಇಬ್ಬರು ಯುವಕರ ಮೇಲೆ ಕ್ರಿಮಿನಲ್‌ಗಳು ಗುಂಡಿನ ದಾಳಿ ನಡೆಸಿದ್ದಾರೆ.
ಈ ಸಂಚಲನಕಾರಿ ಘಟನೆಯ ಸಿಸಿಟಿವಿ ದೃಶ್ಯಾವಳಿ ಕೂಡ ಹೊರಬಿದ್ದಿದೆ ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ ಪಾಟ್ನಾ ನಗರದ ಅಲಮ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿ ಮಂದಿರದ ಬಳಿ ಈ ಕೊಲೆಯ ಘಟನೆ ನಡೆದಿದ್ದು, ನಿರ್ಭೀತ ಅಪರಾಧಿಗಳು ಯುವಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಜನನಿಬಿಡ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಮೂವರು ಬಂದು ಮತ್ತೊಂದು ಬೈಕ್‌ನಲ್ಲಿ ಕಾಯುತ್ತಿದ್ದ ಇಬ್ಬರು ಯುವಕರ ಮೇಲೆ ಮನಬಂದಂತೆ ಗುಂಡು ಹಾರಿಸುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಬಿಳಿ ಅಂಗಿ ಧರಿಸಿದ್ದ ಆರೋಪಿಗಳು ಪಿಸ್ತೂಲ್‌ನಿಂದ ಗುಂಡು ಹಾರಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಟವೆಲ್ ನಿಂದ ಬಾಯಿ ಮುಚ್ಚಿಕೊಂಡಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ ಇಬ್ಬರು ಯುವಕರನ್ನು ಚಿಕಿತ್ಸೆಗಾಗಿ ಎನ್‌ಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪಾಟ್ನಾ ಸಿಟಿ ಎಎಸ್ಪಿ ಆಗಮಿಸಿದ್ದು, ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದು ಎರಡು ಗ್ಯಾಂಗ್‌ಗಳ ನಡುವಿನ ಜಗಳ ಎಂದು ಪೊಲೀಸರು ಹೇಳುತ್ತಿದ್ದಾರೆ.

Previous article17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ
Next articleರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ ಮೋದಿ