ಬೆಂಗಳೂರು: ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮನಗರದ ಮಾಗಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿರುವ ಅವರು ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಸುಳಿವನ್ನು ನೀಡಿದ್ದು ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದರು.