ಹಾವೇರಿ: ಸಮೀಪದ ಮೋಟೆಬೆನ್ನೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದು 6 ಜನ ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ.
ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ಬಳಿ ಘಟನೆ ನಡೆದಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ 6 ಜನ ಮೃತಪಟ್ಟಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮೃತರ ಮಾಹಿತಿ ಇನ್ನಷ್ಟೇ ತಿಳಿದು ಬರಲಿದೆ…