ಹಾಸನ ಜಿಲ್ಲೆಯ ರಾಜಕಾರಣವನ್ನು ರೇವಣ್ಣ ಅವರಿಗೇ ಬಿಟ್ಟಿದ್ದೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ, ಬೆಂಗಳೂರಿನಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಡೂರು ಕ್ಷೇತ್ರದ ಕಾಂಗ್ರೆಸ್ ಪ್ರಮುಖ ಸಿ.ಎಂ. ಧನಂಜಯ ಹಾಗೂ ಕೊಳ್ಳೇಗಾಲ ಕ್ಷೇತ್ರ ನಿವೃತ್ತ ಸರ್ಕಲ್ ಇನ್‌ಸ್ಪೆಕ್ಟರ್ ಪುಟ್ಟಸ್ವಾಮಿ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡ ಬಳಿಕ ಅವರು ಮಾತನಾಡಿದ ಅವರು, ಪಕ್ಷಕ್ಕೆ ದುಡಿದವರನ್ನು ಎಂದೂ ಕೈಬಿಟ್ಟಿಲ್ಲ. ತಾಳ್ಮೆ ಎನ್ನುವುದು ಇಲ್ಲಿ ಮುಖ್ಯ ಎಂದರು. ಅಂತೆಯೇ ಜೆಡಿಎಸ್‌ನ ಎರಡನೇ ಪಟ್ಟಿ ಅಂತಿಮ ಹಂತದಲ್ಲಿದ್ದು, 60 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಇದೇ ತಿಂಗಳ 11 ಅಥವಾ 14ರಂದು ಪ್ರಕಟಿಸಲಾಗುವುದು ಎಂದರು. ಹಾಸನ ಜಿಲ್ಲೆಯ ರಾಜಕಾರಣವನ್ನು ರೇವಣ್ಣ ಅವರಿಗೇ ಬಿಟ್ಟಿದ್ದೇನೆ ಎಂದು ಹೇಳಿದ್ದಾರೆ.
‘ಕಡೂರು ಕ್ಷೇತ್ರದಲ್ಲಿ ಪಕ್ಷಕ್ಕೆ ದುಡಿದಿದ್ದ ಧರ್ಮೇಗೌಡರ ಬದಲು ವೈ.ಎಸ್.ವಿ. ದತ್ತ ಅವರಿಗೆ ಟಿಕೆಟ್ ಕೊಟ್ಟೆವು. ದೇವೇಗೌಡರ ಮಾನಸಪುತ್ರ ಎಂದು ಹೇಳಿಕೊಂಡು ಅವರು ಓಡಾಡಿದರು. ದತ್ತ ಅವರು ವಿಧಾನಸಭೆಯಲ್ಲಿ ನಿನಗೆ ನೆರವಾಗುತ್ತಾರೆ ಎಂದು ದೇವೇಗೌಡರು ಹೇಳಿದ್ದರು. ಆದರೆ, ದತ್ತ ನೆರವೂ ಆಗಲಿಲ್ಲ; ಪಕ್ಷಕ್ಕೆ ದ್ರೋಹ ಮಾಡಿ ಹೋದರು’ ಎಂದು ಆಕ್ರೋಶ ಹೊರಹಾಕಿದರು.