ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿನಿ ಹರ್ಷಿತ (18) ಮೃತ ದುರ್ದೈವಿ. ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದಳು. ನಿನ್ನೆ ಗುರುವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿ ಸಾವು ಖಂಡಿಸಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.