ಹಿಂಡೆನ್ ಬರ್ಗ್: 22ಕ್ಕೆ ದೇಶಾದ್ಯಂತ ಪ್ರತಿಭಟನೆ

0
29

ನವದೆಹಲಿ: ಸೆಬಿ ಮುಖ್ಯಸ್ಥ ಮಧಬಿ ಪುರಿ ಬುಚು ರಾಜೀನಾಮೆ ಹಾಗೂ ಅದಾನಿ ವಿವಾದ ಕುರಿತು ಜಂಟಿ ಸದನ ಸಮಿತಿ ತನಿಖೆಗೆ ಆಗ್ರಹಿಸಿ ಆಗಸ್ಟ್ 22 ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.


ಎಐಸಿಸಿ ಕಚೇರಿಯಲ್ಲಿಂದು ಎಲ್ಲಾ ರಾಜ್ಯ ಘಟಕದ ಮುಖ್ಯಸ್ಥರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಎಐಸಿಸಿ ರಾಜ್ಯ ಉಸ್ತುವಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಹಿಂಡೆನ್ ಬರ್ಗ್ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವಂತೆಯೇ ಸೆಬಿ ಮತ್ತು ಅದಾನಿ ನಡುವಿನ ಸಂಬಂಧ ಕುರಿತು ಆಘಾತಕಾರಿ ಅಂಶ ಬಹಿರಂಗ ನಂತರ ಸಂಪೂರ್ಣ ತನಿಖೆಯ ಅಗತ್ಯವಿದೆ. ಷೇರು ಮಾರುಕಟ್ಟೆಯಲ್ಲಿನ ಸಣ್ಣ ಹೂಡಿಕೆದಾರರ ಹಣವನ್ನು ಅಪಾಯಕ್ಕೆ ಸಿಲುಕಿಸಲು ಸಾಧ್ಯವಿಲ್ಲ. ಮೋದಿ ಸರ್ಕಾರ ಕೂಡಲೇ ಸೆಬಿ ಮುಖ್ಯಸ್ಥರ ರಾಜೀನಾಮೆ ಪಡೆಯಬೇಕು ಮತ್ತು ಈ ಸಂಬಂಧ ಜಂಟಿ ಸದನ ಸಮಿತಿಯಿಂದ ತನಿಖೆ ನಡೆಸಬೇಕೆಂದು ಎಂದಿದ್ದಾರೆ

Previous articleಮನೆ ಖಾಲಿ ಮಾಡಿದ ಜಗದೀಶ್ ಶೆಟ್ಟರ್
Next articleನೋಡಲ್ ಜಿಲ್ಲೆಯಾಗಿ ವಿಜಯಪುರ ಆಯ್ಕೆ ಮಾಡಿಕೊಂಡ ಸುಧಾಮೂರ್ತಿ