ಹಿಂದಿನ ಬಿಜೆಪಿ ಸರ್ಕಾರ ಪಂಚಮಸಾಲಿಗೆ ಟೋಪಿ ಹಾಕಿದೆ

0
40

ವಿಜಯಪುರ: ಹಿಂದಿನ ಬಿಜೆಪಿ ಸರ್ಕಾರ ೨ಡಿ, ೨ಸಿ ಮಿಸಲಾತಿ ಮಾಡಿ ಪಂಚಮಸಾಲಿ ಹೋರಾಟಗಾರರಿಗೆ ಟೋಪಿ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರು ನೀಡಿರುವ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ ೨ಎ, ೨ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು ೨ಬಿ ಯಲ್ಲಿರುವ ಶೇ. ೪ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಸ್ಪಷ್ಟವಾಗಿ ಹೇಳಿದ್ದರೂ ಸಹಿತ, ಬಿಜೆಪಿಯವರು ಪಂಚಮಸಾಲಿ ಹೋರಾಟಗಾರರಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರೆ ಎಂದು ಜರಿದರು.
ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಆಗ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಪಂಚಮಸಾಲಿ ಸಮುದಾಯದವರು ಪ್ರವರ್ಗ ೨ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದರು.

Previous articleನಟ ಅಲ್ಲು ಅರ್ಜುನ್‌ಗೆ 14 ದಿನಗಳ ನ್ಯಾಯಾಂಗ ಬಂಧನ
Next articleಹನಿಟ್ರ್ಯಾಪ್ ಮೂವರ ಬಂಧನ