Home ಅಪರಾಧ ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಗೋವು ಸಾಗಾಟ

ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಗೋವು ಸಾಗಾಟ

0

ಮಂಗಳೂರು: ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದ್ದು 25 ಗೋವುಗಳನ್ನು ರಕ್ಷಿಸಲಾಗಿದೆ.
ಪಿಕಪ್ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಮಂಗಳೂರು- ಮೂಡುಬಿದಿರೆ ರಸ್ತೆಯ ಸೂರಲ್ಪಾಡಿಯಲ್ಲಿ ತಡೆದು ನಿಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪಿಕಪ್ ವಾಹನವನ್ನು ಪರಿಶೀಲಿಸಿದಾಗ 25 ಗೋವುಗಳು ಪತ್ತೆಯಾಗಿವೆ. ಗೋವುಗಳ ಮುಂಗಾಲನ್ನು ವಾಹನದ ಮೇಲ್ಬಾಗದ ಟಾಪ್‌ಗೆ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಅವುಗಳನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ಬಳಿಕ ಹಿಂದೂ ಕಾರ್ಯಕರ್ತರು ಪಿಕಪ್ ವಾಹನ ಮತ್ತು ಗೋವುಗಳನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Exit mobile version