ಮಂಗಳೂರು: ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್‌ಗೆ ಕಲ್ಲು ತೂರಾಟ ನಡೆದಿದೆ.
ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಖಾಸಗಿ ಸಿಟಿ ಬಸ್‌ಗೆ ಕಲ್ಲು ಎಸೆದಿದ್ದರ ಪರಿಣಾಮ ಬಸ್‌ನ ಮುಂಬಾಗದ ಗಾಜು ಸಂಪೂರ್ಣ ಪುಡಿಯಾಗಿದೆ. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನನಾಕರರನ್ನು ಹತೋಟಿಗೆ ತಂದಿದ್ದಾರೆ. ಇದೇ ಸಂದರ್ಭ ಟೈರುಗಳಿಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.